Friday, June 5, 2026
Homeಕರಾವಳಿಬೆಳ್ತಂಗಡಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ: ಕೈ ಕಾರ್ಯಕರ್ತರನ್ನು‌ ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ: ಕೈ ಕಾರ್ಯಕರ್ತರನ್ನು‌ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬೆಳ್ತಂಗಡಿ; ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ಸಚಿವ ಈಶ್ವರಪ್ಪ ರಾಜಿನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ  ಬೆಳ್ತಂಗಡಿ ಮೂರು ಮಾರ್ಗದ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ  ಈಶ್ವರಪ್ಪನವರ ಪ್ರತಿಕೃತಿ ದಹಿಸಿ ರಸ್ತೆ ತಡೆ ನಡೆಸಿಡದರು‌.  ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಎಸ್.ಕೆ.ಹಕೀಂ ಕೊಕ್ಕಡ, ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ ,ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಘವೇಂದ್ರ ಪೂಜಾರಿ, ಇಂಟಕ್ ನಗರ ಅಧ್ಯಕ್ಷ ನವೀನ್ ಗೌಡ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ, ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನಿರಾಲ್ಕೆ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಭಿದೇವ್ ಅರಿಗ,ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ಖಾಲಿದ್ ಕೆ.ಎಚ್,ಗಣೇಶ್ ಕಣಿಯೂರು, ಆರೀಫ್, ನೌಷದ್ ನಾವೂರ, ಗುರುರಾಜ್ ಗುರಿಪಳ್ಳ , ಮನೋಹರ್ ಇಳಂತಿಲ ,ಸುಧೀರ್ ದೇವಾಡಿಗ, ಪ್ರಜ್ವಲ್ ಜೈನ್ ಮುಂತಾದವರು ಪ್ರತಿಭಟನೆಯಲ್ಲಿದ್ದರು.

- Advertisement -

Latest News

error: Content is protected !!