Wednesday, June 24, 2026
Homeತಾಜಾ ಸುದ್ದಿವಿಟ್ಲ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆ: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕುಸಿದ...

ವಿಟ್ಲ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆ: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕುಸಿದ ಕಲ್ಲುಗಳ ರಾಶಿ

- Advertisement -
- Advertisement -

ವಿಟ್ಲ: ಭಾರೀ ಮಳೆಗಾಳಿಗೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನ  ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಡೆದಿದೆ.

ವಿಟ್ಲದಲ್ಲಿ ಇಂದು ಸಂಜೆ ವೇಳೆ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಅಂಗಡಿ ಮಳಿಗೆಗಳ ಮುಂಭಾಗದ ಪಾರ್ಕಿಂಗ್ ನಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗಿತ್ತು. ಪಾರ್ಕಿಂಗ್ ನ ಮೇಲ್ಭಾಗಕ್ಕೆ ಬಿಸಿಲು ಬಾರದಂತೆ ಹಳದಿ ಬಟ್ಟೆಯ ಚಪ್ಪರಕ್ಕೆ ಅಳವಡಿಸಲಾಗಿದ್ದ ಹೋಲೊ ಬ್ಲಾಕ್ ಕಲ್ಲುಗಳ ರಾಶಿ ಗಾಳಿಗೆ ಕೆಳಗಡೆ ಕುಸಿದಿದೆ. ಇದರಿಂದ ಸುಮಾರು ಐದು ದ್ವಿಚಕ್ರ  ವಾಹನಗಳು ಹಾನಿಗೊಂಡಿದೆ. ಸ್ಥಳದಲ್ಲಿ ಜನರು ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

- Advertisement -

Latest News

error: Content is protected !!