Saturday, June 6, 2026
Homeತಾಜಾ ಸುದ್ದಿಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಜ್ಯೋತಿಷಿ ಸೇರಿದಂತೆ ಮೂವರಿಗೆ ಗಂಭೀರ ಗಾಯ

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಜ್ಯೋತಿಷಿ ಸೇರಿದಂತೆ ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಪಘಾತವಾದ ಘಟನೆ ಸಂಪಾಜೆಯ ಕಲ್ಲು ಗುಂಡಿಯ ಮುಖ್ಯಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆ ಡಿವೈಡರ್ ಗೆ ಗುದ್ದಿದ ಪರಿಣಾಮ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಂಪಾಜೆಯಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ನಿಯಂತ್ರಣ ಕಳೆದುಕೊಂಡು ಸೇತುವೆಗೆ ಅಪ್ಪಳಿಸಿದೆ. ಈ ವೇಳೆ ಜೋರಾಗಿ ಮಳೆ ಬರುತ್ತಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಾಳುಗಳನ್ನು ಜ್ಯೋತಿಷಿ ಗುರುರಾಜ್, ಸಂಪಾಜೆಯ ಪ್ರೇಮ್ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!