Saturday, June 6, 2026
Homeಕರಾವಳಿಬೆಳ್ತಂಗಡಿಯ ಕೊಕ್ಕಡದಲ್ಲಿ ಭಗವಧ್ವಜದ ಕಟ್ಟೆಗೆ ಹಾನಿ: ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿಯ ಕೊಕ್ಕಡದಲ್ಲಿ ಭಗವಧ್ವಜದ ಕಟ್ಟೆಗೆ ಹಾನಿ: ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: ಭಗವಧ್ವಜ ಕಟ್ಟೆ ಹಾಗೂ ಭಗವಧ್ವಜಕ್ಕೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ನಡೆದಿದೆ.


ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿಯೇ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಈ ಘಟನೆ ಕುರಿತಂತೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರಿಗೆ ಮಾಹಿತಿ ನೀಡಿದ್ದು, ಈ ಕೃತ್ಯವನ್ನು ಖಂಡಿಸಿರುವ ಅವರು ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!