Friday, June 5, 2026
Homeಕರಾವಳಿಮಾಣಿಯಲ್ಲಿ ಕಾರು-ಲಾರಿ ನಡುವೆ ಅಪಘಾತ; ವಾಹನ ಸಂಚಾರ ಅಸ್ತವ್ಯಸ್ತ

ಮಾಣಿಯಲ್ಲಿ ಕಾರು-ಲಾರಿ ನಡುವೆ ಅಪಘಾತ; ವಾಹನ ಸಂಚಾರ ಅಸ್ತವ್ಯಸ್ತ

- Advertisement -
- Advertisement -

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.


ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಕ್ಟೋ ಕಾರಿಗೆ ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯಾರಿಗೂ ಗಾಯವಾಗಿಲ್ಲ. ಆದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನಗಳು ರಸ್ತೆಯಲ್ಲಿ ನಿಂತ ಪರಿಣಾಮ ಕೆಲ ಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಬಂದು ವಾಹನಗಳನ್ನು ತೆರವುಗೊಳಿಸಿದ್ದಾರೆ.


ಇಂದು ಬೆಳಿಗ್ಗೆ ನಡೆದ ಬಸ್, ಲಾರಿ, ಕಾರು ನಡುವಿನ ಸರಣಿ ಅಪಘಾತದಲ್ಲಿ ಸುಮಾರು ಮೂರು ಗಂಟೆಗಳ ತನಕ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅಡಚಣೆ ಉಂಟಾಗಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು.

- Advertisement -

Latest News

error: Content is protected !!