ರಾಯ್ಪುರ : ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಸದ್ಯ ವೆಂಟಿಲೇಟರ್ ಬೆಂಬಲದಲ್ಲಿರುವ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.
74 ವರ್ಷದ ಅಜಿತ್ ಜೋಗಿ ಅವರನ್ನು 2016 ರಲ್ಲಿ ಕಾಂಗ್ರೆಸ್ ನಿಂದ ವಜಾಗೊಳಿಸಿದ ನಂತರ ಅವರು ಸ್ಥಾಪಿಸಿದ ಜನತಾ ಕಾಂಗ್ರೆಸ್ ಛತ್ತೀಸ್ ಗಡದ (ಜೆಸಿಸಿ) ನೇತೃತ್ವ ವಹಿಸಿದ್ದಾರೆ. ಇದೀಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ರಾಯ್ಪುರದ ಶ್ರೀ ನಾರಾಯಣ ಆಸ್ಪತ್ರೆ ತಿಳಿಸಿದೆ.
2000-2003ರವರೆಗೆ ಇವರು ಛತ್ತೀಸ್ ಗಡದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಮಾಹಿತಿ ಪ್ರಕಾರ, ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಛತ್ತೀಸ್ಗಡ ಸಿಎಂ ಭೂಪೇಶ್ ಬಘೇಲ್ ಈಗಾಗಲೇ ಅವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.