Friday, June 5, 2026
Homeತಾಜಾ ಸುದ್ದಿಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ : ದಲಿತ ನಾಯಕ, ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ...

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ : ದಲಿತ ನಾಯಕ, ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ ಅರೆಸ್ಟ್

- Advertisement -
- Advertisement -

ಅಹಮದಾಬಾದ್  ವಡಗಾಮ್  ಕ್ಷೇತ್ರದ ಶಾಸಕ ಮತ್ತು ದಲಿಕ ನಾಯಕ ಜಿಗ್ನೇಶ್‌ ಮೆವಾನಿ ಅವರನ್ನು ಅಸ್ಸಾಂ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದಿದ್ದಾರೆ.

‘ಗೋಡ್ಸೆಯನ್ನು ದೇವರಾಗಿ ಕಾಣುವ’ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಕೋಮುಗಳ ನಡುವಿನ ಸಂಘರ್ಷದ ವಿರುದ್ಧ ಮಾತನಾಡಬೇಕು, ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು ಎಂಬರ್ಥದ ಟ್ವೀಟ್‌ಗಳನ್ನು ಜಿಗ್ನೇಶ್‌ ಮಾಡಿದ್ದಾರೆ.ಆ ಬಗ್ಗೆ ದಾಖಲಾಗಿರುವ ದೂರಿನ ಅನ್ವಯ ಪೊಲೀಸರು ಜಿಗ್ನೇಶ್ ಮೆವಾನಿಯನ್ನು ಬಂಧಿಸಿದ್ದಾರೆ.

ಅಸ್ಸಾಂ ನಾಲ್ವರು ಪೊಲೀಸರನ್ನು ಒಳಗೊಂಡ ತಂಡವು ಬನಾಸಕಾಂಠಾದ ಪಾಲನ್ಪುರ್‌ನ ಅತಿಥಿ ಗೃಹದಿಂದ ಜಿಗ್ನೇಶ್ ಅವರನ್ನು ವಶಕ್ಕೆ ಪಡೆದಿದೆ.ಅಸ್ಸಾಂ ಕೋಕರಾಝಾರ್‌ ಜಿಲ್ಲೆಯಲ್ಲಿ ಅನುಪ್‌ ಕುಮಾರ್‌ ಡೇ ಎಂಬುವವರು ಜಿಗ್ನೇಶ್‌ ಅವರ ವಿರುದ್ಧ ದೂರು ನೀಡಿದ್ದಾರೆ. ಸೆಕ್ಷನ್‌ 120ಬಿ (ಅಪರಾಧ ಸಂಚು), ಸೆಕ್ಷನ್‌ 153 (ಎ) (ಎರಡು ಸಮುದಾಯಗಳ ನಡುವೆ ದ್ವೇಷ ಹಂಚುವುದು), 295 (ಎ) (ಧಾರ್ಮಿಕ ಭಾವನೆಗೆ ಧಕ್ಕೆ ತರಲು ಪ್ರಾರ್ಥನಾ ಸ್ಥಳಕ್ಕೆ ಕಳಂಕ ಉಂಟು ಮಾಡುವುದು), 506 (ಅಪರಾಧದ ಬೆದರಿಕೆ) ಹಾಗೂ ಐಟಿ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!