Saturday, June 6, 2026
Homeತಾಜಾ ಸುದ್ದಿಸುಳ್ಯ: ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಆದ್ಯತೆಯಾಗಲಿ: ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಸಚಿವ ಅಂಗಾರ ಅಭಿಮತ

ಸುಳ್ಯ: ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಆದ್ಯತೆಯಾಗಲಿ: ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಸಚಿವ ಅಂಗಾರ ಅಭಿಮತ

- Advertisement -
- Advertisement -

ಸುಳ್ಯ: ಆರೋಗ್ಯ ರಕ್ಷಣೆ, ಉತ್ತಮ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರೋಗ್ಯದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿರಬೇಕು ಎಂದು ಬಂದರು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆವಿಜಿ ಮೆಡಿಕಲ್‌‌ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗು ಅರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷದವರೆಗಿನ ಚಿಕಿತ್ಸಾ ವೆಚ್ಚವನ್ನು ಉಚಿತವಾಗಿ ನೀಡಲಾಗುತಿದೆ. ಮಾಹಿತಿ ಕೊರತೆಯಿಂದ ಜನರಿಗೆ ಹಲವು ಯೋಜನೆಗಳು ತಲುಪದ ಸ್ಥಿತಿ ಇದೆ. ಆದುದರಿಂದ ಸರಕಾರದ ಪ್ರತಿಯೊಂದು ಯೋಜನೆಗಳ ಮಾಹಿತಿಯನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವಂತಗಬೇಕು ಎಂದು ಸಚಿವರು ಹೇಳಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು.

- Advertisement -

Latest News

error: Content is protected !!