Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ

- Advertisement -
- Advertisement -

ಮೈಸೂರು : ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ ಬಂದಿಲ್ಲ , ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ.ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವುದರಿಂದ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪರಿಸ್ಥಿತಿ ಇನ್ನೂ ಬಂದಿಲ್ಲ.

ಆದರೆ, ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ. ಕೋವಿಡ್ ನಿಯಮ ಪಾಲಿಸಿ ಎಂದರು. ಜೊತೆಗೆ ಕೋವಿಡ್ ಬೇರೆ ದೇಶದಲ್ಲಿ ಇದೆ, ನಮ್ಮಲ್ಲಿ ಇಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ ಎಂದು ಮನವಿ ಮಾಡಿದರು.

- Advertisement -

Latest News

error: Content is protected !!