Friday, June 5, 2026
Homeತಾಜಾ ಸುದ್ದಿ10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಬರಲು ಸಿದ್ಧರಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...

10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಬರಲು ಸಿದ್ಧರಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಬೆಂಗಳೂರು : ಬಿಜೆಪಿ ಪಕ್ಷಕ್ಕೆ 10 ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದು, ಶೀಘ್ರವೇ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ಕ್ಕೂ ಹೆಚ್ಚು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಸೇರ್ಪಡೆಗೆ ಕಾದು ಕುಳಿತಿದ್ದಾರೆ. ಚುನಾವಣೆಗೆ ಮುನ್ನವೇ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಶಾಸಕರು ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂದರು.

ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಬಿಜೆಪಿಯಲ್ಲಿ ಬಹಳ ಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ. ಅವರನ್ನು ಸೇರ್ಪಡೆ ಮಾಡುವ ಸಂಬಂಧ ನಾನು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!