Thursday, June 4, 2026
Homeಕರಾವಳಿಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ, ವ್ಯಕ್ತಿ ಸಾವು

ಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ, ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ‌ಮೃತಪಟ್ಟ ಘಟನೆ ರಾ.ಹೆ‌.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಡೆದಿದೆ.

ಮೃತ ಸ್ಕೂಟರ್‌ ಸವಾರನನ್ನು ರೊನಾಲ್ಡ್ (59) ಮೃತ ದುರ್ದೈವಿ. ಕೆಲಸದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅವರು ಕೊಣಾಜೆಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿಯು ಸ್ಕೂಟರ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡು ಕೊನೆಯುಸಿರೆಳಿದ್ದಾರೆ. ಲಾರಿಯು ಮೊದಲು ಕಾರಿಗೆ ಢಿಕ್ಕಿ ಹೊಡೆದಿದ್ದು, ಬಳಿಕ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದೇ ದಾರಿಯಾಗಿ ಸಾಗುತ್ತಿದ್ದ ಶಾಸಕ ಯುಟಿ ಖಾದರ್ ಅವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!