Friday, June 5, 2026
Homeತಾಜಾ ಸುದ್ದಿಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಬಿದ್ದ ಮರ: ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಬಿದ್ದ ಮರ: ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

- Advertisement -
- Advertisement -

ರಾಮನಗರ: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ  ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ನಡೆದಿದೆ.

ಸುಂದ್ರೇಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ಶೀಲಾ, ಗಾನವಿ, ಸಾನ್ವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಓಮ್ನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!