Wednesday, June 3, 2026
Homeತಾಜಾ ಸುದ್ದಿನಾಳೆ ಮಂಗಳೂರಿನಿಂದ ಪ್ರಧಾನಿ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

ನಾಳೆ ಮಂಗಳೂರಿನಿಂದ ಪ್ರಧಾನಿ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ನಾಳೆ ದೇಶದಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಎಲ್ಲಾ ರಾಜ್ಯಗಳ ಸಿಎಂಗಳ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಿಂದ ಪ್ರಧಾನಿ ಜೊತೆಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಮಧ್ಯಾಹ್ನ ಹನ್ನೆರಡು ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಗೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.‌

ನಾಳೆ ಬೆಳಗ್ಗೆ ಬೆಂಗಳೂರಿಂದ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡು ನಂತರ ಮೂಡಬಿದಿರೆಗೆ ತೆರಳಲಿದ್ದಾರೆ.

ನಾಳೆ ಬೆಳಗ್ಗೆ 10.20ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ, 11.20 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ತೆರಳಿ 11.50ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಆವರಣ ತಲುಪಲಿದ್ದಾರೆ.

- Advertisement -

Latest News

error: Content is protected !!