Saturday, June 6, 2026
Homeಕರಾವಳಿಉಡುಪಿಉಡುಪಿ: ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಕು.ಪನ್ನಗ ರಾವ್ ಜಿಲ್ಲೆಗೆ ಪ್ರಥಮ

ಉಡುಪಿ: ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಕು.ಪನ್ನಗ ರಾವ್ ಜಿಲ್ಲೆಗೆ ಪ್ರಥಮ

- Advertisement -
- Advertisement -

ಉಡುಪಿ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ 2021ನೇ ಸಾಲಿನ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಕು. ಪಿ. ಜಿ. ಪನ್ನಗ ರಾವ್ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅದೇ ರೀತಿ ಕರ್ನಾಟಕ ಸರ್ಕಾರವು ಕೊಡಮಾಡುವ ‘ಕರ್ನಾಟಕ ಸಂಗೀತ ನೃತ್ಯ ಅಕಾಡಮಿ’ 2021-22 ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದಾರೆ.

ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ಡಾ. ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯರಾಗಿರುವ ಇವರು ಉಡುಪಿಯ ಗಣೇಶ ರಾವ್ ಮತ್ತು ಸುಮನ ಜಿ ರಾವ್ ಇವರ ಪುತ್ರಿಯಾಗಿದ್ದಾರೆ. ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿ ಅಧ್ಯಯನವನ್ನು ಮಾಡುತ್ತಿದ್ದಾರೆ.

- Advertisement -

Latest News

error: Content is protected !!