Saturday, June 13, 2026
Homeಕರಾವಳಿಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ರದ್ದು : ಮಧ್ಯಾಹ್ನ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ಮೂಡಬಿದಿರೆಗೆ...

ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ರದ್ದು : ಮಧ್ಯಾಹ್ನ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ಮೂಡಬಿದಿರೆಗೆ ಭೇಟಿ

- Advertisement -
- Advertisement -

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಸಿಎಂ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಗೆ ಆಗಮಿಸಲಿದ್ದಾರೆ.

ಕೋವಿಡ್ ನಾಲ್ಕನೇ ಅಲೆ ಕುರಿತಂತೆ ಪ್ರಧಾನಿ ಮೋದಿ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ಮುಗಿದ ಬಳಿಕ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಮೂಡಬಿದಿರಗೆ ಸಿಎಂ ಭೇಟಿ ನೀಡಲಿದ್ದಾರೆ‌.

ಈ ಮೊದಲು ನಿಗದಿಯಾಗಿದ್ದ ಪ್ರಕಾರ ಸಿಎಂ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಧಾನಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಬೇಕಿತ್ತು.

ಆದರೆ ವಿಮಾನದಲ್ಲಿ ತಾಂತ್ರಿಕ ದೋಷ ಎದುರಾದ ಕಾರಣ ನೇರವಾಗಿ ಬೆಂಗಳೂರಿನಿಂದ ಮೂಡಬಿದಿರೆಗೆ ಸಿಎಂ ಭೇಟಿ ನೀಡಿ ಮಧ್ಯಾಹ್ನದ ಬಳಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!