Sunday, June 7, 2026
Homeತಾಜಾ ಸುದ್ದಿಸಂಪುಟ ಸಚಿವರು ತಮ್ಮ ಆಸ್ತಿ ವಿವರ ಘೋಷಣೆ ಮಾಡುವಂತೆ ಆದೇಶ ಹೊರಡಿಸಿದ ಯೋಗಿ

ಸಂಪುಟ ಸಚಿವರು ತಮ್ಮ ಆಸ್ತಿ ವಿವರ ಘೋಷಣೆ ಮಾಡುವಂತೆ ಆದೇಶ ಹೊರಡಿಸಿದ ಯೋಗಿ

- Advertisement -
- Advertisement -

ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರುವ ಯೋಗಿ ಆದಿತ್ಯನಾಥ್ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.


ತಮ್ಮಸಂಪುಟದ ಸಚಿವರು ಸೇರಿದಂತೆ ಅವರ ಕುಟುಂಬ ಸದಸ್ಯರು ಹಾಗೂ ಎಐಎಸ್, ಎಪಿಎಸ್ ಅಧಿಕಾರಿಗಳು ತಮ್ಮ ಆಸ್ತಿಯ ವಿವರಗಳನ್ನು ಮುಂದಿನ ಮೂರು ತಿಂಗಳೊಳಗೆ ಘೋಷಣೆ ಮಾಡಬೇಕು. ಈ ವಿವರಗಳು ಆನ್‌ಲೈನ್‌ನಲ್ಲಿ ಎಲ್ಲರಿಗೂ ಲಭ್ಯವಿರಬೇಕು ಎಂದು ಆದೇಶ ನೀಡಿದ್ದಾರೆ.

ಪ್ರಮಾಣವಚನ ಸ್ವೀಕಾರ ಮಾಡಿದ ಮೂರು ತಿಂಗಳೊಳಗೆ ತಮ್ಮಆಸ್ತಿ ಘೋಷಣೆ ಮಾಡಬೇಕು ಎಂದು ಸೂಚಿಸಿದ್ದಾರೆ. ಸಚಿವರೊಂದಿಗೆ ಇಂದು ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!