Friday, June 5, 2026
Homeಕರಾವಳಿಉಡುಪಿಗಂಗೊಳ್ಳಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಸೊತ್ತು ಕಳ್ಳತನ

ಗಂಗೊಳ್ಳಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಸೊತ್ತು ಕಳ್ಳತನ

- Advertisement -
- Advertisement -

ಗಂಗೊಳ್ಳಿ : ಮರವಂತೆ ಗ್ರಾಮದ ಗಾಂಧಿನಗರ ನೈಕಾಡಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ರವೀನಾ ಎಂಬುವರ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿ, ಕಪಾಟಿನ ಬೀಗವನ್ನು ತೆಗೆದು ಲಾಕರ್‌ನಲ್ಲಿಟ್ಟಿದ್ದ ಚಿನ್ನದ ಕರಿಮಣಿ ಸರ, ಚಿನ್ನದ ಕಿವಿಯ ಬೆಂಡೋಲೆ ಒಂದು ಜೊತೆ ಹಾಗೂ 8,500 ರೂ. ನಗದು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 1,38,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!