Friday, June 5, 2026
Homeತಾಜಾ ಸುದ್ದಿಕಾಲೇಜಿನ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜಿನ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು : ಕಾಲೇಜಿನ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗೇದಹಳ್ಳಿಯಲ್ಲಿರುವ ಗೀತಂ ವಿವಿಯಲ್ಲಿ ತಡರಾತ್ರಿ ನಡೆದಿದೆ. ಉಗಾಂಡ ಮೂಲದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗೀತಂ ವಿವಿಯ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ವಿವಿ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ಉಗಾಂಡ ಮೂಲದ ಹಸೀನಾ ಎಂದು ಗುರುತಿಸಲಾಗಿದೆ.

ಕಳೆದೊಂದು ವಾರದಿಂದ ಆಂಧ್ರ ಮತ್ತು ಕರ್ನಾಟಕ ವಿದ್ಯಾರ್ಥಿಗಳ ನಡುವಿನ ಗಲಾಟೆಯಿಂದ ರೋಸಿ ವಿದ್ಯಾರ್ಥಿನಿ ಹಸೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!