Thursday, June 4, 2026
Homeಆರಾಧನಾಸುಳ್ಯದ ಕುಕ್ಕುಜಡ್ಕ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ ದೇಣಿಗೆ

ಸುಳ್ಯದ ಕುಕ್ಕುಜಡ್ಕ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ ದೇಣಿಗೆ

- Advertisement -
- Advertisement -

ಸುಳ್ಯ: ಕುಕ್ಕುಜಡ್ಕ ಶ್ರೀ ವಿಷ್ಣುಮೂರ್ತಿ ರಕೇಶ್ವರಿ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ.2 ಲಕ್ಷವನ್ನು ದೇಣಿಗೆಯಾಗಿ ಡಾ. ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮುಖಾಂತರ ಒದಗಿಸಿರುತ್ತಾರೆ.


ಸುಳ್ಯ ಯೋಜನಾಧಿಕಾರಿ ನಾಗೇಶ್ ಹಾಗೂ ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ ರವರು ದೈವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪಕ ರ ಸಮ್ಮುಖದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಿಗೆ ಚೆಕ್ ನ್ನು ದೈವಸ್ಥಾನದಲ್ಲಿ ನೀಡಿದರು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ.ಜಿ. ಸತ್ಯನಾರಾಯಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಘವೇಂದ್ರ ಪುಳಿ ಮಾರಡ್ಕ, ಆಡಳಿತ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ ಕುಕ್ಕುಜಡ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡುಗುಳಿ,ಚೆನ್ನಕೇಶವ, ಕೃಷ್ಣಕುಮಾರ್ ಬಾಲಾಜಿ ಸ್ಟೋರ್ ಕುಕ್ಕುಜಡ್ಕ, ಉಮೇಶ್ ಆಂತರಿಕ ಲೆಕ್ಕಪರಿಶೋಧಕರು, ವಲಯ ಮೇಲ್ವಿಚಾರಕರಾದ ಸೀತಾರಾಮ್, ಸೇವಾ ಪ್ರತಿನಿಧಿಗಳಾದ ದಿವ್ಯಾ, ಕವಿತಾ, ವ್ಯವಸ್ಥಾಪನಾ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಮಿತಿ ಯ ಸದಸ್ಯರು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

Latest News

error: Content is protected !!