Saturday, June 13, 2026
Homeಕರಾವಳಿಬಂಟ್ವಾಳ; ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ವಾಳ; ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ; ತೆಂಗಿನಕಾಯಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ‌ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ವಗ್ಗ ಸಮೀಪದ ಕಾಡಬೆಟ್ಟು‌ ಎಂಬಲ್ಲಿ ನಡೆದಿದೆ.

ವಗ್ಗ ಸಮೀಪದ ಕಾಡಬೆಟ್ಟು‌ನಿವಾಸಿ ಯೋಗೀಶ್ ಮೃತ ದುರ್ದೈವಿ. ನಿನ್ನೆ ಸಂಜೆ ವೇಳೆ‌ ಮನೆಯ‌ ಅಂಗಳದಲ್ಲಿದ್ದ ತೆಂಗಿನ ಮರದಿಂದ ಕಾಯಿ ಕೊಯ್ಯಲೆಂದು ಮರಕ್ಕೆ ಹತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ತಕ್ಷಣ‌ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!