- Advertisement -
![]()
- Advertisement -
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಶಿರ್ವದ ಕುಂಜಾರುಗಿರಿನಗರ ಅರಸೀಕಟ್ಟೆ ಎಂಬಲ್ಲಿ ನಡೆದಿದೆ. ನಟರಾಜ್ (62) ಮೃತ ದುರ್ದೈವಿ.
ನಟರಾಜ್ ಎ.30ರಂದು ಮನೆಯೊಳಗಡೆ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯ ಗೊಂಡಿದ್ದರು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


