Wednesday, June 3, 2026
Homeಕರಾವಳಿವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ಯುವಕನ ಕಿರುಕುಳ ಆರೋಪ - ವಿ.ಹಿಂ ಪರಿಷತ್ ವಿಭಾಗದ...

ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ಯುವಕನ ಕಿರುಕುಳ ಆರೋಪ – ವಿ.ಹಿಂ ಪರಿಷತ್ ವಿಭಾಗದ ದಕಾರ್ಯದರ್ಶಿ ಶರಣ್ ಪಂಪುವೆಲ್ ಭೇಟಿ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕನ್ಯಾನದಲ್ಲಿ ಅಪ್ರಾಪ್ತ ಆತ್ಮಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.


ವಿಟ್ಲ ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತ ಆತ್ಮಿಕ ಎಂಬುವವಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದಕ್ಕೆ ಸಾಹುಲ್ ಹಮೀದ್ ಎಂಬ ಯುವಕನ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ.


ಅಲ್ಲದೇ ಯುವಕನ ವಿರುದ್ಧ ಪೊಲೀಸ್ ದೂರು ಕೂಡಾ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಮೃತ ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಿದರು.


ಅಲ್ಲದೇ ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!