Friday, June 5, 2026
Homeತಾಜಾ ಸುದ್ದಿಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಹದಿನೈದು ದಿನಗಳ ಕಾಲ ಮದ್ಯ ವ್ಯಾಪಾರಿಗಳ ಮುಷ್ಕರ

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಹದಿನೈದು ದಿನಗಳ ಕಾಲ ಮದ್ಯ ವ್ಯಾಪಾರಿಗಳ ಮುಷ್ಕರ

- Advertisement -
- Advertisement -

ಉಡುಪಿ: ರಾಜ್ಯಾದ್ಯಂತ ಹದಿನೈದು ದಿನಗಳ ಕಾಲ ಮದ್ಯ ವ್ಯಾಪಾರಿಗಳ ಮುಷ್ಕರ ನಡೆಯಲಿದೆ.

ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ, ಅಬಕಾರಿ ಸಚಿವರು, ಮುಖ್ಯಮಂತ್ರಿಗಳು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮದ್ಯ ಖರೀದಿಯನ್ನು ವಿಭಾಗ ಮಟ್ಟದಲ್ಲಿ ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಘೋಷಿಸಿದ್ದಾರೆ.

ಒಂದು ದಿನ ಮದ್ಯ ಖರೀದಿ ಮಾಡದಿದ್ದರೆ ರಾಜ್ಯದಲ್ಲಿ 70 ಕೋಟಿ ರೂಪಾಯಿ ನಷ್ಟವಾಗಲಿದ್ದು, ನಾಳೆ ಗುಲ್ಬರ್ಗ ವಿಭಾಗದಲ್ಲಿ ಮದ್ಯ ವ್ಯಾಪಾರಿಗಳಿಂದ ಮುಷ್ಕರ ನಡೆಯಲಿದೆ.
ಹೊಸಪೇಟೆ, ಬೆಳಗಾವಿ, ಮೈಸೂರು ಮಂಗಳೂರು ವಿಭಾಗದಲ್ಲಿ ಮದ್ಯ ಸಿಗಲ್ಲ ಎಂದು ಗೋವಿಂದ ರಾಜ್ ಹೇಳಿದ್ದಾರೆ.

ಮೇ ತಿಂಗಳ 19ನೇ ತಾರೀಖಿನವರೆಗೆ ನಿರಂತರ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದು ಗೋವಿಂದರಾಜ್ ತಿಳಿಸಿದ್ದಾರೆ.

- Advertisement -

Latest News

error: Content is protected !!