Thursday, June 4, 2026
Homeತಾಜಾ ಸುದ್ದಿರಾಜ್ಯ ಮಟ್ಟದಲ್ಲಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಿ :ಪಶು‌ ಸಂಗೋಪನಾ‌‌ ಇಲಾಖೆಗೆ ಸಿಎಂ ಸೂಚನೆ

ರಾಜ್ಯ ಮಟ್ಟದಲ್ಲಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಿ :ಪಶು‌ ಸಂಗೋಪನಾ‌‌ ಇಲಾಖೆಗೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಗೋ ಮಾತಾ ಸಹಕಾರ ಸಂಘ ಸ್ಥಾಪನೆ ಸಂಬಂಧ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದ್ದಾರೆ.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು‌ ಈ ನಿರ್ದೇಶನ ನೀಡಿದ್ದಾರೆ.

ಅಲ್ಲದೇ ಗ್ರಾಮೀಣ ಪ್ರದೇಶಗಳ ಪಶುಚಿಕಿತ್ಸಾಲಯಗಳನ್ನು ಹೊಸ ಮಾದರಿಯಲ್ಲಿ ಮಾಡಬೇಕು‌ ಎಂದು‌ ಸೂಚಿಸಿರುವ ಬಸವರಾಜ ಬೊಮ್ಮಾಯಿ, ಸಿಬ್ಬಂದಿ ನೇಮಕಾತಿಗಾಗಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಇದಕ್ಕಾಗಿ ನೇಮಿಸುವಂತೆ ಹೇಳಿದ್ದಾರೆ.

ಇನ್ನು ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್ ಅನ್ನು ಜೂನ್ ಅಂತ್ಯದಲ್ಲಿ ಪ್ರಾರಂಭಿಸುವಂತೆ ಸಲಹೆ ನೀಡಿರುವ ಸಿಎಂ, ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆಎಂಎಫ್ ಮೂಲಕ 2000 ಗೋವು ತಳಿಗಳನ್ನು ರೈತರಿಗೆ ಹಂಚಿಕೆ ಮಾಡುವಂತೆಯೂ‌ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!