Tuesday, July 21, 2026
Homeಕರಾವಳಿಉಡುಪಿಬಿಜೆಪಿಗೆ ಸೇರಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಬಿಜೆಪಿಗೆ ಸೇರಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

- Advertisement -
- Advertisement -

ಉಡುಪಿ: ಅತ್ತ ಕಾಂಗ್ರೆಸ್ ಗೆ ರಾಜೀನಾಮೆ ನೀಡುತ್ತಿದ್ದಂತೆ ಇತ್ತ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರಿದ್ದಾರೆ. ಆ ಮೂಲಕ ಬಹು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯೊಂದಕ್ಕೆ ಪ್ರಮೋದ್ ಅಂತ್ಯ ಹಾಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಾರೆ.

ಯಾವುದೇ ಷರತ್ತು ಇಲ್ಲದೇ ನಾನು ಬಿಜೆಪಿ ಮತ್ತು ನರೇಂದ್ರ ಮೋದಿ ಮೇಲೆ ವಿಶ್ವಾಸ ಇಟ್ಟು ಬಿಜೆಪಿ ಸೇರಿದ್ದೇನೆ ಎಂದು ಸೇರ್ಪಡೆ ಬಳಿಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಇನ್ನು ಇದೇ ವೇಳೆ ವರ್ತೂರು ಪ್ರಕಾಶ್ ಕೂಡ ಬಿಜೆಪಿ ಸೇರಿದ್ದಾರೆ..

ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!