Monday, June 8, 2026
Homeಉತ್ತರ ಕನ್ನಡಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು : ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು : ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಂಗಳೂರು: ಪದ್ಮಶ್ರೀ ಪುರಸ್ಕೃತರಾಗಿರುವ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಮಂಗಳೂರಿನ ಕೆಎಂಸಿ‌ ಆಸ್ಪತ್ರೆಗೆ ಸುಕ್ರಿ ಅವರನ್ನು ಸಂಬಂಧಿಕರು ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ‌‌ ಕಾರವಾರ ಆಸ್ಪತ್ರೆಯಿಂದ ಸುಕ್ರಿ ಬೊಮ್ಮಗೌಡ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ತಲೆ‌ ಸುತ್ತುವಿಕೆ ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ಕೆಎಂಸಿ‌ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಹಾಲಕ್ಕಿ ಒಕ್ಕಲಿಗ ಸಮುದಾಯದ ಸುಪ್ರಸಿದ್ಧ ಜಾನಪದ ಗಾಯಕಿಯಾಗಿರುವ ಸುಕ್ರಿ ಬೊಮ್ಮಗೌಡ ಅವರಿಗೆ ಸಾಂಪ್ರದಾಯಿಕ ಬುಡಕಟ್ಟು ಸಂಗೀತ ಸಂರಕ್ಷಿಸುವ ಕಾರ್ಯಕ್ಕೆ ಪ್ರದ್ಮಶ್ರೀ ಪ್ರಶಸ್ತಿ ಲಭಿಸಿತ್ತು.

- Advertisement -

Latest News

error: Content is protected !!