Thursday, June 4, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ‌ ಶ್ರೀನಿಧಿ ಸ್ವಸಹಾಯ ಸಂಘಕ್ಕೆ ಅತ್ಯುತ್ತಮ ರೈತ ಉತ್ಪಾದಕ ಸಂಸ್ಥೆ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲೆಯ‌ ಶ್ರೀನಿಧಿ ಸ್ವಸಹಾಯ ಸಂಘಕ್ಕೆ ಅತ್ಯುತ್ತಮ ರೈತ ಉತ್ಪಾದಕ ಸಂಸ್ಥೆ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: ರಾಜ್ಯಮಟ್ಟದ ಅತ್ಯುತ್ತಮ ರೈತ ಉತ್ಪಾದಕರ ಸಂಸ್ಥೆಗಳಿಗೆ ಇಂದು‌ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀನಿಧಿ ಸ್ವಸಹಾಯ ಸಂಘಕ್ಕೆ ಅತ್ಯುತ್ತಮ ರೈತ ಉತ್ಪಾದಕ ಸಂಸ್ಥೆ ಪ್ರಶಸ್ತಿ ಲಭಿಸಿದೆ. ಅಡಿಕೆ ಹಾಳೆ ತಟ್ಟೆ ತಯಾರಿಕೆಯಲ್ಲಿನ ಸಾಧನೆಗಾಗಿ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಗಿರಿರಾಜ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರಶಸ್ತಿ ಪ್ರದಾನ ಮಾಡಿದರು.

ಜಲಾನಯನ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ವಿಶ್ವಬ್ಯಾಂಕ್ ನೆರವಿನ ರಾಷ್ಟ್ರ ಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನೆ ಹಾಗೂ ಎಫ್ ಪಿಓ ಏಕರೂಪ ಬ್ರ್ಯಾಂಡಿಂಗ್ ಸ್ಪರ್ಧೆಯ ಅನಾವರಣ ಈ ಸಂದರ್ಭದಲ್ಲಿ ನಡೆಯಿತು.

ಸಮಾರಂಭದಲ್ಲಿ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಒಡಿಶಾ ಸರ್ಕಾರದ ಕೃಷಿ ಮತ್ತು ರೈತರ ಸಬಲೀಕರಣ ಖಾತೆ ಸಚಿವರಾದ ಅರುಣ್ ಕುಮಾರ ಸಾಹೋ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ತೋಟಗಾರಿಕಾ ಸಚಿವ
ಮುನಿರತ್ನ ಉಪಸ್ಥಿತರಿದ್ದರು.

- Advertisement -

Latest News

error: Content is protected !!