Thursday, June 4, 2026
Homeತಾಜಾ ಸುದ್ದಿವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ ; ಜೂನ್ 3 ರಂದು ಮತದಾನ

ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ ; ಜೂನ್ 3 ರಂದು ಮತದಾನ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಈ ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 3 ರಂದು ಚುನಾವಣೆ ನಡೆಯಲಿದೆ.

ಜೂನ್ 14 ರಂದು ತೆರವಾಗಲಿರುವ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಲೆಹರ್ ಸಿಂಗ್ ಸಿರೋಯಾ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಅರ್.ಬಿ. ತಿಮ್ಮಾಪುರ, ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಕೆ.ವಿ. ನಾರಾಯಣಸ್ವಾಮಿ ಮತ್ತು ಹೆಚ್‌.ಎಂ. ರಮೇಶ್ ಗೌಡ ಅವರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದೆ.

ಜೂನ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದು, ಸಂಜೆ 6 ಗಂಟೆಗೆ ಮತ ಎಣಿಕೆ ನಡೆಯಲಿದೆ.

- Advertisement -

Latest News

error: Content is protected !!