Sunday, June 7, 2026
Homeಕರಾವಳಿಉಡುಪಿಶಿರ್ವ: ಆತ್ಮಹತ್ಯೆಗೆ ಯತ್ನಿಸಿದ್ದ ಎಂಬಿಎ ಪದವೀಧರೆ ಚಿಕಿತ್ಸೆ ಫಲಿಸದೆ ಸಾವು

ಶಿರ್ವ: ಆತ್ಮಹತ್ಯೆಗೆ ಯತ್ನಿಸಿದ್ದ ಎಂಬಿಎ ಪದವೀಧರೆ ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಶಿರ್ವ: ಉದ್ಯೋಗ ಸಿಗದ ಚಿಂತೆಯಲ್ಲಿ ಎಂಬಿಎ ವಿದ್ಯಾಭ್ಯಾಸ ಮಾಡಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ವದ ಗ್ರಾಮದ ಎಡ್ಕರು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಸಹನಾ ( 23) ಎಂದು ಗುರುತಿಸಲಾಗಿದೆ.

ಇವರು ಒಂದೂವರೆ ವರ್ಷದ ಹಿಂದೆ ಮಂಗಳೂರಿನ ಕಾಲೇಜಿನಲ್ಲಿ ಎಂಬಿಎ ವಿದ್ಯಾಭ್ಯಾಸ ಮುಗಿಸಿದ್ದು, ಆಕೆಗೆ ಯಾವುದೇ ಉದ್ಯೋಗ ದೊರಕಿರಲಿಲ್ಲ. ಇದೇ ಚಿಂತೆಯಲ್ಲಿ ಎ.30ರಂದು ಎಡ್ಕರುವಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದು ಮೇ 1ರಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ, ಮೇ 9ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!