Friday, June 5, 2026
Homeಕರಾವಳಿಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವು

ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಮಂಗಳೂರು : ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ಪ್ರಸ್ತುತ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ರೋಸನ್ ಜೋಸ್ (21) ಮೃತ ವಿದ್ಯಾರ್ಥಿನಿ.

ಸೋಮವಾರ ರಾತ್ರಿ ಊಟ ಮಾಡಿ ಕಾಲೇಜು ಹಾಸ್ಟೆಲ್ ರೂಮಿನಲ್ಲಿ ರೋಶನ್ ಮಲಗಿದ್ದ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಆತನ ತಂದೆ ಕರೆ ಮಾಡಿದ್ದಾಗ ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡ ತಂದೆ ರೂಮ್ ಪಕ್ಕದಲ್ಲಿರುವ ಮತ್ತೊಬ್ಬ ವಿದ್ಯಾರ್ಥಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಉಳಿದ ವಿದ್ಯಾರ್ಥಿಗಳು ಸೇರಿ ರೂಮು ಬಾಗಿಲು ಬಡಿದಾಗ ಯಾವುದೇ ಸ್ಪಂದನೆ ಸಿಗಲಿಲ್ಲ. ತಕ್ಷಣ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ತಂದು ಬಾಗಿಲು ಒಡೆದು ನೋಡಿದಾಗ ಮಲಗಿದ ಸ್ಥಿತಿಯಲ್ಲೇ ಬಿದ್ದುಕೊಂಡಿದ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.

ವಿಷಯ ತಿಳಿದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!