Saturday, June 6, 2026
Homeತಾಜಾ ಸುದ್ದಿಶಿಕ್ಷಣ ಸಚಿವರ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಕ್ಷಣ ಸಚಿವರ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಮಧ್ಯಪ್ರದೇಶ: ಶಿಕ್ಷಣ ಸಚಿವರ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಪೋಚನೇರ್ ಗ್ರಾಮದಲ್ಲಿ ನಡೆದಿದೆ.

ತವರು ಮನೆಯಿಂದ ಗಂಡನ ಮನೆಗೆ ಮರಳಿದ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಸವಿತಾ ಪರ್ಮಾರ್ (22) ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕುಟುಂಬಸ್ಥರು ಕೊಠಡಿಗೆ ಹೋಗಿ ನೋಡಿದಾಗ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಸವಿತಾ ಮೂರು ವರ್ಷಗಳ ಹಿಂದೆ ಶಾಲಾ ಶಿಕ್ಷಣ ಸಚಿವ ಪರ್ಮಾರ್ ಅವರ ಪುತ್ರ ದೇವರಾಜ್ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಕಳೆದ ಒಂದು ವರ್ಷದಿಂದ ಪತಿ-ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಇದರಿಂದಾಗಿ ಸವಿತಾ ಕೂಡ ತನ್ನ ತಾಯಿಯ ಮನೆಗೆ ಹೋಗಿದ್ದರು. ಆದರೆ ಒಂದು ದಿನ ಮೊದಲು ಅವಳು ತನ್ನ ಅತ್ತೆಯ ಮನೆಗೆ ಮರಳಿದ್ದರು. ಆದರೆ ಮಂಗಳವಾರ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸವಿತಾ ಶವ ಪತ್ತೆಯಾಗಿದೆ. ಪೊಲೀಸರು ‌ತನಿಖೆ‌ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!