Friday, June 5, 2026
Homeಕರಾವಳಿಉಡುಪಿಉಡುಪಿ: ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು: ಮೋಹಕತಾರೆಗೆ ಮಹಮ್ಮದ್ ನಲಪಾಡ್ ಚಾಟಿ

ಉಡುಪಿ: ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು: ಮೋಹಕತಾರೆಗೆ ಮಹಮ್ಮದ್ ನಲಪಾಡ್ ಚಾಟಿ

- Advertisement -
- Advertisement -

ಉಡುಪಿ: ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಮತ್ತು ಸಚಿವ ಅಶ್ವತ್ಥನಾರಾಯಣ ಭೇಟಿ ವಿಚಾರದಲ್ಲಿ ರಾಜಕೀಯ ಹೇಳಿಕೆ-ಪ್ರತಿಹೇಳಿಕೆಗಳು ದಿನಂಪ್ರತಿ ಕೇಳಿಬರುತ್ತಿವೆ. ಈ ನಡುವೆ ತನ್ನ ಟ್ವೀಟ್ ಮೂಲಕ ಡಿಕೆಶಿಗೆ ನಟಿ ಕಂ ರಾಜಕಾರಣಿ ರಮ್ಯಾ ಚಾಟಿ ಬೀಸುತ್ತಿದ್ದಾರೆ. ಇದೀಗ ಡಿಕೆಶಿ ಪರ ಅವರ ಬಲಗೈ ಬಂಟ ಮಹಮ್ಮದ್ ನಲಪಾಡ್ ರಮ್ಯಾಗೆ ತಿರುಗೇಟು ಕೊಟ್ಟಿದ್ದಾರೆ….

ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ರಮ್ಯಾ ಮೇಲೆ ಗರಂ ಆಗಿದ್ದಾರೆ. ಪ್ರತಿಭಟನೆಯಲ್ಲಿ‌ ಪಾಲ್ಗೊಂಡು ಮಾಧ್ಯಮದ ಜೊತೆ ಮಾತನಾಡಿದ ಅವರು ,ರಮ್ಯ ಇಷ್ಟು ದಿನ ಎಲ್ಲಿದ್ದರು ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯ ಎಲ್ಲಿದ್ದರು? ಎಲ್ಲೂ ಇಲ್ಲದ ರಮ್ಯಾ ಸಡನ್ನಾಗಿ ಯಾಕೆ ಬಂದರು? ಎಂದು ಗರಂ ಆಗಿದ್ದಾರೆ.

ರಮ್ಯ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ? ಡಿಕೆ ಶಿವಕುಮಾರ್ ಅವರು ಬಹಳ ಕ್ಲಿಯರಾಗಿ ಇವತ್ತು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ ನ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ ಎಂದ ಅವರು, ಡಿಕೆಶಿ, ಎಂಬಿ ಪಾಟೀಲ್, ಸಿದ್ದರಾಮಯ್ಯ ನಾವೆಲ್ಲ ಜೊತೆಗಿದ್ದೇವೆ. ಸುಮ್ಮನೆ ಡಿಸ್ಟರ್ಬ್ ಕ್ರಿಯೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ.

ರಮ್ಯಾಗೆ ಸಂಥಿಂಗ್ ಅಟೆಂಶನ್ ಸೀಕಿಂಗ್ ಇದೆ.‌ ನಾನು ಇನ್ನೂ ಇದ್ದೀನಿ ಎಂದು ತೋರಿಸಿಕೊಳ್ಳುತ್ತಿರಬಹುದು.ಈ ವಿಚಾರಕ್ಕೂ ರಮ್ಯಾಗೂ ಏನು ಸಂಬಂಧ?ರ ಮ್ಯಾ ಅವರ ಹಳೆಯ ಟ್ವೀಟ್ ಗಳನ್ನು ತೆಗೆದುಕೊಂಡು ನೋಡಿ. ಯಾವುದೋ ಸಿನಿಮಾಗಳ ಬಗ್ಗೆ ಮಾತ್ರ ಟ್ವೀಟ್ ಮಾಡಿಕೊಂಡಿದ್ದರು. ಇತ್ತೀಚಿಗೆ ಅವರು ಯಾವುದೇ ರಾಜಕೀಯ ಟ್ವೀಟ್ ಗಳನ್ನು ಮಾಡಿಲ್ಲ. ರಮ್ಯಾ ಅವರು ಒಳ್ಳೆಯವರೇ, ಚಿಕ್ಕ ವಯಸ್ಸಿನಲ್ಲಿ ಸಂಸದರಾದವರು. ರಮ್ಯಾ ಈಗಾಗಲೇ ಒಳ್ಳೆಯ ಸಾಧನೆಗಳನ್ನು ಮಾಡಿದ್ದಾರೆ. ನಾನು ರಮ್ಯಾ ಅವರ ವಿರುದ್ಧ ಇಲ್ಲ, ನಟಿ ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ನಟಿ ರಮ್ಯಾ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು  ಹೇಳಿದರು.

- Advertisement -

Latest News

error: Content is protected !!