Wednesday, June 3, 2026
HomeUncategorizedಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

- Advertisement -
- Advertisement -

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿ ಮಾಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಸಂಖ್ಯಾಬಲವಿಲ್ಲದಿದ್ದ ಕಾರಣ ಸರ್ಕಾರ ವಿಧೇಯಕ ಮಂಡಿಸಿರಲಿಲ್ಲ.

ಈ ಮಧ್ಯೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

- Advertisement -

Latest News

error: Content is protected !!