Saturday, June 28, 2025
Homeಕರಾವಳಿಮೂಡಬಿದಿರೆ ಯುವತಿಗೆ ಮಾದಕ ವಸ್ತು ನೀಡಿ ನಿರಂತರ ಅತ್ಯಾಚಾರ:  ಆರೋಪಿ ಶಾನ್ ನವಾಸ್ ನನ್ನು ಬಂಧಿಸಿದ...

ಮೂಡಬಿದಿರೆ ಯುವತಿಗೆ ಮಾದಕ ವಸ್ತು ನೀಡಿ ನಿರಂತರ ಅತ್ಯಾಚಾರ:  ಆರೋಪಿ ಶಾನ್ ನವಾಸ್ ನನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು:   ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ನಿವಾಸಿ ಶಾನ್ ನವಾಸ್ (36) ಬಂಧಿತ ಆರೋಪಿ.
ಅರೋಪಿ ಮೂಡಬಿದರೆಯ  ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದು, . ಅಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ ರೂ.1,50,000/- ಸುಲಿಗೆ ಮಾಡಿದ್ದನು.

ವಿವಿಧ ಕಡೆಗಳಲ್ಲಿನ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ಅತ್ಯಾಚಾರ ನಡೆಸಿದ್ದನು. ಈ ಬಗ್ಗೆ ನೊಂದ ಯುವತಿಯು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಳ್ಳುವಂತೆ ಕಡತವನ್ನು ಮಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ವರ್ಗಾಯಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಯವರು ಪ್ರಕರಣದಲ್ಲಿ ಭಾಗಿಯಾದ ಆರೋಪಿ ಶಾನ್‌ ನವಾಸ್ ನನ್ನು ಬಂಧಿಸಿದ್ದಾರೆ.

ಆರೋಪಿಯು  ಯುವತಿಯನ್ನು ನಗರದ ವಿವಿಧ ಲಾಡ್ಜ್ ಗಳಲ್ಲಿ ಅಲ್ಲದೇ ಪುಣೆ, ಮುಂಬೈಯ ವಿವಿಧ ಲಾಡ್ಜ್ ಗಳಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!