Sunday, October 18, 2026
Homeಕರಾವಳಿಮಂಗಳೂರು: ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ

ಮಂಗಳೂರು: ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ

- Advertisement -
- Advertisement -

ಮಂಗಳೂರು: ಮಹಾರಾಷ್ಟ್ರದಿಂದ ಕೇರಳ ಕಡೆಗೆ ಈರುಳ್ಳಿ ಸಾಗಾಟ ನಡೆಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಶುಕ್ರವಾರ ನಡೆದಿದೆ.ಲಾರಿಯಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗೊಳೊಂದಿಗೆ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.

ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ ಲಾರಿ ಕಾಪಿಕಾಡ್‌ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ.ಲಾರಿಯಲ್ಲಿದ್ದ ಈರುಳ್ಳಿ ತುಂಬಿದ್ದ ಗೋಣಿ ಚೀಲಗಳು ಹೊರಗೆ ಬಿದ್ದಿವೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ದಕ್ಷಿಣ ಸಂಚಾರ ವಿಭಾಗದ ಪೊಲೀಸರು ಆಗಮಿಸಿ ವಾಹನಗಳನ್ನು ತೆರವುಗೊಳಿಸಿದರು.

- Advertisement -

Latest News

error: Content is protected !!