Thursday, June 4, 2026
Homeಕರಾವಳಿಮಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಿದ ಜಿಲ್ಲಾಧಿಕಾರಿ

ಮಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ಮಂಗಳೂರು : ಇಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಚಿವರನ್ನು ಸ್ವಾಗತಿಸಿದರು.

ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ನಿರ್ಮಲಾ‌ ಸೀತಾರಾಮನ್, ಬೆಳಗ್ಗೆ 9.20ಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ ಉಡುಪಿಯ ಕುಕ್ಕಿಕಟ್ಟೆಯಲ್ಲಿ ಶ್ರೀಕೃಷ್ಣ ಬಾಲ ನಿಕೇತನದ ವಿಸ್ತರಣಾ ಬ್ಲಾಕ್ ಉದ್ಘಾಟನೆ ಮಾಡಲಿರುವ ಕೇಂದ್ರ ಸಚಿವೆ, ಸಂಜೆ 6 ಗಂಟೆಗೆ ಟ್ಯಾಪ್ಮಿ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!