Friday, June 5, 2026
Homeಅಪರಾಧಅಪರಿಚಿತ ವ್ಯಕ್ತಿಯಿಂದ ಬಾಲಕನಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಅಪರಿಚಿತ ವ್ಯಕ್ತಿಯಿಂದ ಬಾಲಕನಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು : ಅಪರಿಚಿತ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆಯು ಕಳೆದ ಏಪ್ರಿಲ್ 21 ರಂದು ಪುತ್ತೂರಿನಲ್ಲಿ ನಡೆದಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಾಲಕನು ತನ್ನ ಅಜ್ಜಿಯ ಜೊತೆಗೆ ಸೊಸೈಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆಯು ನಡೆದಿರುತ್ತದೆ. ಆರೋಪಿ ಕಾಸರಗೋಡು ಮೂಲದ ಶ್ರೀಜಿತ್(27) ಎಂದು ಪೊಲೀಸರು ತಿಳಿಸಿರುತ್ತಾರೆ.

ಆರೋಪಿಯ ವಿರುದ್ದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.

ಶ್ರೀಜಿತ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದು, ಆರೋಪಿಯು ಕಾಸರಗೋಡಿನಲ್ಲಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

- Advertisement -

Latest News

error: Content is protected !!