Thursday, June 4, 2026
Homeತಾಜಾ ಸುದ್ದಿನಾಳೆಯಿಂದ 2022-23ನೇ ಶೈಕ್ಷಣಿಕ ವರ್ಷ ಆರಂಭ: ಸರ್ಕಾರಿ ಶಾಲೆ ಆವರಣ ಸ್ವಚ್ಛಗೊಳಿಸಿದ ಶಿಕ್ಷಣ ಸಚಿವರು

ನಾಳೆಯಿಂದ 2022-23ನೇ ಶೈಕ್ಷಣಿಕ ವರ್ಷ ಆರಂಭ: ಸರ್ಕಾರಿ ಶಾಲೆ ಆವರಣ ಸ್ವಚ್ಛಗೊಳಿಸಿದ ಶಿಕ್ಷಣ ಸಚಿವರು

- Advertisement -
- Advertisement -

ತುಮಕೂರು: ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ನಾಳೆಯಿಂದ ಶಾಲೆಗಳು ಆರಂಭವಾಗಲಿವೆ.ತುಮಕೂರುತಿಪಟೂರು: ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ನಾಳೆಯಿಂದ ಶಾಲೆಗಳು ಆರಂಭವಾಗಲಿವೆ.

ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಂಗಾಪುರದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಆವರಣ ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲ್ಗೊಂಡಿದ್ದಾರೆ.

ರಂಗಾಪುರದ ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು, ಸ್ಥಳೀಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯೊಂದಿಗೆ ಶಾಲೆ ಆವರಣವನ್ನು ಸ್ವಚ್ಛಗೊಳಿಸಿ ಗಿಡಗಳನ್ನು ಸಚಿವರು ನೆಟ್ಟಿದ್ದಾರೆ. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಳೆ ತುಮಕೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾರಂಭದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಿದ್ದಾರೆ

- Advertisement -

Latest News

error: Content is protected !!