Saturday, June 6, 2026
HomeಕರಾವಳಿBIG Breaking: ಕಿಲ್ಲರ್ ಕೊರೋನಾಗೆ ಮಂಗಳೂರಿನ ಮಹಿಳೆ ಬಲಿ

BIG Breaking: ಕಿಲ್ಲರ್ ಕೊರೋನಾಗೆ ಮಂಗಳೂರಿನ ಮಹಿಳೆ ಬಲಿ

- Advertisement -
- Advertisement -

ಉಳ್ಳಾಲ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಇಂದು ಮಂಗಳೂರಿನ ಬೋಳೂರಿನ 58 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದಾಗಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂದಿತ ಕಾಯಿಲೆಯಿಂದ ಬಳಲುತ್ತಿದ್ದ 58 ವರ್ಷದ ಮಹಿಳೆಗೆ ಸೋಂಕು ತಗಳಿತ್ತು ನಂತರ ಗಂಟಲಿನ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಅದರ ವರದಿ ಏಪ್ರಿಲ್ ೩೦ರಂದು ಬಂದಿದ್ದು ಅದರಲ್ಲಿ ಕೋವಿಡ್ ದೃಢಪಟ್ಟಿತ್ತು ನಂತರ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

ದ.ಕ ಜಿಲ್ಲೆಯಲ್ಲಿ ಈವರೆಗೂ 32 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಆ ಪೈಕಿ ಪ್ರಸ್ತುತ 14 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಜನರು ಗುಣಮುಖರಾಗಿದ್ದಾರೆ.

ಇಂದು ರಾಜ್ಯದಲ್ಲಿ 26 ಹೊಸ ಕೊರೋನಾ ಕೇಸ್ ಪತ್ತೆಯಾಗಿತ್ತು. ಅಲ್ಲದೇ ಕಲಬುರ್ಗಿಯಲ್ಲಿ ಓರ್ವ ವ್ಯಕ್ತಿ ಕೂಡ ಕೊರೋನಾಗೆ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಮಂಗಳೂರಿನಲ್ಲಿಯೂ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯನ್ನು ಪಡೆದಿದೆ.

- Advertisement -

Latest News

error: Content is protected !!