Friday, June 5, 2026
Homeಅಪರಾಧಬಸ್ಸುಗಾಗಿ ಕಾಯುತ್ತಿದ್ದ ವ್ಯಕ್ತಿ ವಿದ್ಯುತ್ ಶಾಕ್ ನಿಂದ ಸಾವು

ಬಸ್ಸುಗಾಗಿ ಕಾಯುತ್ತಿದ್ದ ವ್ಯಕ್ತಿ ವಿದ್ಯುತ್ ಶಾಕ್ ನಿಂದ ಸಾವು

- Advertisement -
- Advertisement -

ಬೆಂಗಳೂರು : ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ಬಸ್ಸುಗಾಗಿ ಕಾಯುತ್ತಿದ್ದ ವ್ಯಕ್ತಿಯು ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಸಂಭವಿಸಿದೆ.

ವಿದ್ಯುತ್ ಶಾಕ್ ಹೊಡೆದ ವ್ಯಕ್ತಿಯು ಕುಸಿದು ಬೀಳುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ವ್ಯಕ್ತಿಯು ಮೃತಪಟ್ಟಿದ್ದಾನೆ ಎನ್ನಲಾಗಿದೆ. 

ಬಸ್ ನಿಲ್ದಾಣದಲ್ಲಿ ಸೀಟಿಗೆ ಅಳವಡಿಸಿಕೊಂಡಿದ್ದ ಜಾಹಿರಾತು ಫಲಕದ ಬೋರ್ಡ್‌ನಿಂದ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಪ್ರಯಾಣಿಕ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ವೃತ್ತ ವ್ಯಕ್ತಿಯ ವಯಸ್ಸು 25 ರಿಂದ 30 ವರ್ಷ ಆಗಿರಬಹುದು ಎನ್ನಲಾಗಿದೆ. ಆದರೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

- Advertisement -

Latest News

error: Content is protected !!