- Advertisement -
![]()
- Advertisement -
ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಗಾಳಿಯ ಪ್ರಮಾಣ ಕೂಡಾ ಹೆಚ್ಚಿರಲಿದೆ ಎಂದು ರಾಜ್ಯ ಹವಾಮಾನ ಕೇಂದ್ರದಿಂದ ಮುನ್ನೆಚ್ಚರಿಕೆ ನೀಡಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಾಜ್ಯ ಹವಾಮಾನ ಕೇಂದ್ರದಿಂದ ಸೂಚನೆ ರವಾನಿಸಲಾಗಿದೆ.
ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಿಸಲ್ಪಟ್ಟಿದೆ.
- Advertisement -


