Wednesday, June 3, 2026
Homeತಾಜಾ ಸುದ್ದಿನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಹಿನ್ನೆಲೆ: ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಮಾನಸಿಕ ಆರೋಗ್ಯ...

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಹಿನ್ನೆಲೆ: ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಮಾನಸಿಕ ಆರೋಗ್ಯ ಸಹಾಯವಾಣಿ

- Advertisement -
- Advertisement -

ಬೆಂಗಳೂರು: ನಾಳೆ ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟಗೊಳ್ಳುತ್ತಿರುವ
ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಆರಂಭಿಸಲಾಗಿದೆ.

ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯನ್ನು ಆರೋಗ್ಯ ಇಲಾಖೆ ತೆರೆದಿದೆ.

ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಣಿ ಮೂಲಕ ಟೆಲಿ ಕೌನ್ಸಿಲಿಂಗ್ ನೀಡಲಾಗುತ್ತದೆ.

ಒತ್ತಡದಲ್ಲಿರುವಂತಹ ವಿದ್ಯಾರ್ಥಿಗಳು 080-46110007 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

- Advertisement -

Latest News

error: Content is protected !!