ಬಂಟ್ವಾಳ: ಅಪ್ರಾಪ್ತ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿಗೆ ಜನ್ಮ ನೀಡಿರೋ ಘಟನೆ ಪಾಣೆಮಂಗಳೂರು ಗ್ರಾಮದ ಉಪ್ಪುಗುಡ್ಡೆಯಲ್ಲಿ ನಡೆದಿದೆ. ಆರೋಪಿ ಅಶ್ವತ್ಥ ಎಂಬಾತನ ವಿರುದ್ಧ ಬಾಲಕಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
17 ವರ್ಷದ ಬಾಲಕಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಸ್ನೇಹಿತೆ ಮದುವೆ ಕಿನ್ನಿಗೋಳಿಯಲ್ಲಿ ನಡೆದಾಗ ಅಲ್ಲಿನ ಕೊಲ್ಲೂರು ವಾಸಿ ಅಶ್ವತ್ಥ ಎಂಬಾತನ ಪರಿಚಯವಾಗಿತ್ತು.. 2021ರ ಜುಲೈನಲ್ಲಿ ಆರೋಪಿಯ ಮನೆಗೆ ಬಾಲಕಿ ಹೋಗಿದ್ದು, ಅಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಅಕ್ಟೋಬರ್ ನಲ್ಲೂ ಇದೇ ರೀತಿಯ ಕೃತ್ಯ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಇದಕ್ಕೆ ಅಶ್ವತ್ಥ್ ಕಾರಣ ಎಂದು ಆರೋಪಿಸಿ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.