Friday, June 5, 2026
Homeಕರಾವಳಿಬಂಟ್ವಾಳ:ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ವಿಧಿವಶ

ಬಂಟ್ವಾಳ:ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ವಿಧಿವಶ

- Advertisement -
- Advertisement -

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. ಅಲ್ಲದೇ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟುವಾಗಿದ್ದಾರೆ.

2007 ರಲ್ಲಿ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿದ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದರು.ಪ್ರಸ್ತುತ ಬ್ಯಾಂಕ್ ಆಫ್ ಬರೋಡಾ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇವರ ನಿಧನಕ್ಕೆ ಕ್ರೀಡಾಕ್ಷೇತ್ರದ ಗಣ್ಯರು ಮಾತ್ರವಲ್ಲದೇ ಇತರ ಅನೇಕ ಗಣ್ಯರ ಕಂಬನಿ ಮಿಡಿದಿದ್ದಾರೆ.

- Advertisement -

Latest News

error: Content is protected !!