Friday, June 5, 2026
Homeಕರಾವಳಿಉಡುಪಿಯಲ್ಲಿ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಪ್ರಕರಣ : ಮಂಗಳೂರಿನಲ್ಲಿ ಬಾಡಿಗೆ ಮನೆ, ಆನ್ ಲೈನ್...

ಉಡುಪಿಯಲ್ಲಿ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಪ್ರಕರಣ : ಮಂಗಳೂರಿನಲ್ಲಿ ಬಾಡಿಗೆ ಮನೆ, ಆನ್ ಲೈನ್ ಮೂಲಕ ಕಾರ್ ಬುಕ್ ಮಾಡಿದ್ದ ಜೋಡಿ

- Advertisement -
- Advertisement -

ಉಡುಪಿ: ಬೆಂಗಳೂರಿನ ಪ್ರೇಮಿಗಳು ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧಿಸಿದಂತೆ ಕುಟುಂಬದ ಓರ್ವ ಸದಸ್ಯ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಾವರ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಮೃತದೇಹಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯಶವಂತ ಮತ್ತು ಜ್ಯೋತಿ ಮಂಗಳೂರಿನಲ್ಲಿ ಮೂರು ದಿನಗಳ ಹಿಂದೆ ಬಾಡಿಗೆ ಮನೆ ಮಾಡಿದ್ದರು ಎಂದು ಹೇಳಲಾಗಿದೆ.

ಅಲ್ಲದೇ 5000 ರೂಪಾಯಿ ಪಾವತಿಸಿ ಆಧಾರ್ ದಾಖಲೆ ಕೊಟ್ಟು ಬಾಡಿಗೆ ಕಾರು ಪಡೆದಿದ್ದರು.

ಆನ್ ಲೈನ್ ಮೂಲಕ ಕಾರ್ ಬುಕ್ ಮಾಡಿದ್ದ ಯಶವಂತ ಮತ್ತು ಜ್ಯೋತಿ ಬಂದು ಕಾರು ಪಡೆದು ಹೋಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!