Wednesday, June 3, 2026
Homeಕ್ರೀಡೆದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಕೆ.ಎಲ್. ರಾಹುಲ್ ಭಾರತ ತಂಡಕ್ಕೆ ಕ್ಯಾಪ್ಟನ್

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಕೆ.ಎಲ್. ರಾಹುಲ್ ಭಾರತ ತಂಡಕ್ಕೆ ಕ್ಯಾಪ್ಟನ್

- Advertisement -
- Advertisement -

ನವದೆಹಲಿ: ಜೂನ್ 9 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇಂದು ಬಿಸಿಸಿಐ ತಂಡವನ್ನು ಘೋಷಣೆ ಮಾಡಿದ್ದು, ಕೆ.ಎಲ್. ರಾಹುಲ್ ಭಾರತ ತಂಡವನ್ನು ಮುನ್ನೆಡೆಸಲಿದ್ದಾರೆ.

ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ತಂಡದ ಉಪನಾಯಕನಾಗಿ ವಿಕೆಟ್ ಕೀಪರ್ ರಿಷಭ್ ಪಂತ್ ಆಯ್ಕೆಯಾಗಿದ್ದು, ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿದ್ದಾರೆ.

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ತಂಡದಲ್ಲಿದ್ದ ವೆಂಕಟೇಶ್ ಐಯ್ಯರ್, ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಐಯ್ಯರ್ ಅವರನ್ನು ಈ ಬಾರಿ ಪರಿಗಣಿಸಿಲ್ಲ.

ವೇಗದ ಬೌಲಿಂಗ್ ವಿಭಾಗದಲ್ಲಿ ಮೊದಲ ಬಾರಿಗೆ ಉಮ್ರಾನ್ ಮಲಿಕ್ ಮತ್ತು ಅರ್ಶ್ ದೀಪ್ ಸಿಂಗ್ ಭಾರತ ತಂಡ ಪ್ರವೇಶಿಸಿದ್ದು, ಸ್ಪಿನ್ನರ್ ಗಳಾಗಿ ಯುಜುವೇಂದ್ರ ಚಹಲ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿ ಇದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ಕೂಡಾ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೆ ತಂಡಕ್ಕೆ ಮರಳಿದ್ದಾರೆ.

- Advertisement -

Latest News

error: Content is protected !!