- Advertisement -
![]()
- Advertisement -
ಬಂಟ್ವಾಳ: ಇಲ್ಲಿನ ಎಸ್ ವಿ ಎಸ್ ಕಾಲೇಜು ಸಂಚಾಲಕ ಹಾಗೂ ಉಪನ್ಯಾಸಕನ ವಜಾಕ್ಕೆ ಆಗ್ರಹಿಸಿ ಶುಕ್ರವಾರ ಆರಂಭಗೊಂಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಇಂದೂ ಮುಂದುವರಿದಿದ್ದು, ಕಾಲೇಜಿನಲ್ಲಿ ಉದ್ಭವಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿವೆ.
ಪ್ರತಿಭಟನೆಗೆ ಎಬಿವಿಪಿಯೂ ಜೊತೆಗೂಡಿದ್ದು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದೆ. ಕಾಲೇಜು ಆವರಣದ ಹೊರಭಾಗದಲ್ಲಿ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿದ್ಯಾರ್ಥಿ ಮುಖಂಡರೊಂದಿಗೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಪೋಷಕರು ನೀಡಿದ ಅಹವಾಲುಗಳನ್ನು ಸ್ವೀಕರಿಸಿ ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎಬಿವಿಪಿ ಮುಖಂಡ ಹರ್ಷಿತ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
- Advertisement -


