Saturday, June 6, 2026
Homeಕರಾವಳಿಡಾ. ಯಶೋವರ್ಮ ಅವರ ನಿಧನಕ್ಕ ನಳಿನ್‍ಕುಮಾರ್ ಕಟೀಲ್ ಸಂತಾಪ

ಡಾ. ಯಶೋವರ್ಮ ಅವರ ನಿಧನಕ್ಕ ನಳಿನ್‍ಕುಮಾರ್ ಕಟೀಲ್ ಸಂತಾಪ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು ಮತ್ತು ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು ಎಂದು ನಳೀನ್ ಕುಮಾರ್ ಕಟೀಲ್ ಮಾಧ್ಯಮ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

- Advertisement -

Latest News

error: Content is protected !!