- Advertisement -
![]()
- Advertisement -
ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದ್ದು
ಲಾರಿ ಸಹಿತ ಮಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್‌ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ (38), ಉಮರ್ ಫಾರೂಕ್ (23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಒಂದು ಲಾರಿ ಮತ್ತು 12 ಕೋಣಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


