Thursday, June 4, 2026
Homeಕರಾವಳಿಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ....

ಎಸ್ ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

- Advertisement -
- Advertisement -

ಬೆಂಗಳೂರು: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ. ಯಶೋವರ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಸಂಬಂಧಿ ಯಶೋವರ್ಮ ಅವರ ನಿಧನದ ಸುದ್ದಿ ಆಘಾತ ತಂದಿದೆ. ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಾವಿರಾರು ಪ್ರತಿಭಾವಂತರು, ಗಣ್ಯರನ್ನು ಈ ನಾಡು, ದೇಶಕ್ಕೆ ಕೊಟ್ಟ ಕೀರ್ತಿ ಅವರದ್ದಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಮ್ಮ ಸರಳ ಹಾಗೂ ಸೌಮ್ಯ ಸ್ವಭಾವದಿಂದಲೇ ವಿದ್ಯಾರ್ಥಿಗಳ ಮನಗೆದ್ದು, ಅವರನ್ನು ಉತ್ತಮ ದಾರಿಯಲ್ಲಿ ನಡೆಸಿದ ಯಶೋವರ್ಮರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆ ಶಿಕ್ಷಣ ಕ್ಷೇತ್ರ ಹಾಗೂ ಅವರ ಶಿಷ್ಯ ವೃಂದಕ್ಕೆ ಭರಿಸಲಾಗದ ನೋವು ತಂದಿದೆ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಬಂಧುಗಳು ಹಾಗೂ ಶಿಷ್ಯ ವೃಂದಕ್ಕೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನೂ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!